HomeKarnatakaBREAKING NEWS: ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಬಿ ಫಾರಂ ಪಡೆದುಕೊಂಡ ಜಗದೀಶ್ ಶೆಟ್ಟರ್

BREAKING NEWS: ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಬಿ ಫಾರಂ ಪಡೆದುಕೊಂಡ ಜಗದೀಶ್ ಶೆಟ್ಟರ್

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದು, ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಲು ಬಿ ಫಾರಂ ಪಡೆದುಕೊಂಡಿದ್ದಾರೆ.

ಪತ್ರಿಕಾಗೋಷ್ಠಿ ಬಳಿಕ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ತಮ್ಮ ಕಚೇರಿಯಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿ ಫಾರಂ ನೀಡಿದ್ದಾರೆ.

ಜಗದೀಶ್ ಶೆಟ್ಟರ್ ಅವರಿಗೆ ಬಿ ಫಾರಂ ನೀಡಿದ ಬಳಿಕ ಅವರಿಗೆ ಅಭಿನಂದಿಸಿದ ಡಿ.ಕೆ. ಶಿವಕುಮಾರ್ ಶುಭ ಕೋರಿದ್ದಾರೆ. ಹುಬ್ಬಳ್ಳಿಗೆ ತೆರಳಿದ ಬಳಿಕ ರೋಡ್ ಶೋ ಮಾಡಿ ತಮ್ಮ ಶಕ್ತಿ ಪ್ರದರ್ಶನದ ನಂತರ ಶೆಟ್ಟರ್ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular