ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಗೌರಿಶಂಕರ್ ಅವರ ಆಯ್ಕೆಯನ್ನು ಹೈಕೋರ್ಟ್ ಅನೂರ್ಜಿತಗೊಳಿಸಿದ್ದು, ಇದೀಗ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಗೌರಿಶಂಕರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಮಧ್ಯಂತರ ಆದೇಶವನ್ನು ನೀಡಿರುವ ಸುಪ್ರೀಂ ಕೋರ್ಟ್, ಗೌರಿಶಂಕರ್ ನಾಮಪತ್ರ ಸಲ್ಲಿಕೆಗೆ ಹಸಿರು ನಿಶಾನೆ ತೋರಿಸಿದೆ.
ಒಂದು ವೇಳೆ ಗೌರಿಶಂಕರ್ ಸ್ಪರ್ಧಿಸಲು ಸಾಧ್ಯವಾಗದಿದ್ದ ಪಕ್ಷದಲ್ಲಿ ಅವರ ಪತ್ನಿಯನ್ನು ವಿಧಾನಸಭಾ ಚುನಾವಣೆ ಕಣಕ್ಕಿಳಿಸಲು ಜೆಡಿಎಸ್ ನಿರ್ಧರಿಸಿತ್ತು. ಇದೀಗ ಅವರ ನಾಮಪತ್ರ ಸಲ್ಲಿಕೆಗೆ ‘ಸುಪ್ರೀಂ’ ಗ್ರೀನ್ ಸಿಗ್ನಲ್ ನೀಡಿರುವ ಕಾರಣ ಅವರೇ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗುವ ಸಾಧ್ಯತೆ ಇದೆ.