HomeKarnatakaBIG NEWS: ವರಿಷ್ಠರು ಸೂಚಿಸಿದರೆ ಮಾತ್ರ ಸ್ಪರ್ಧೆ ಎಂದ ಸಂಸದೆ ಸುಮಲತಾ

BIG NEWS: ವರಿಷ್ಠರು ಸೂಚಿಸಿದರೆ ಮಾತ್ರ ಸ್ಪರ್ಧೆ ಎಂದ ಸಂಸದೆ ಸುಮಲತಾ

ಮಂಡ್ಯ: ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಕುಮಾರಸ್ವಾಮಿ ಸ್ಪರ್ಧೆ ಮಾಡುವ ವದಂತಿಯಿದೆ. ವರಿಷ್ಠರು ಸೂಚಿಸಿದರೆ ಮಾತ್ರ ನಾನು ಮಂಡ್ಯದಿಂದ ಸ್ಪರ್ಧಿಸುತ್ತೇನೆ ಎಂದು ಸಂಸದೆ ಸುಮಲತಾ ತಿಳಿಸಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ, ಈವರೆಗೆ ಪಕ್ಷ ನನಗೆ ಯಾವುದೇ ಸೂಚನೆಯನ್ನು ನೀಡಿಲ್ಲ. ಪಕ್ಷ ಸೂಚಿಸಿದರೆ ಮಾತ್ರ ನನ್ನ ಸ್ಪರ್ಧೆ ಇರಲಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಡ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಮರ್ಥರಿದ್ದಾರೆ ಎಂದರು. ಇದೇ ವೇಳೆ ಸುಮಲತಾ ಅಪ್ರಬುದ್ಧ ರಾಜಕಾರಣಿ ಎಂಬ ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸುಮಲತಾ, ಅಪ್ರಬುದ್ಧ ರಾಜಾಕರಾಣಿ ಯಾರು ಎಂಬುದನ್ನು ಜನರು ತೋರಿಸ್ತಾರೆ. 5 ವರ್ಷಗಳಲ್ಲಿ ಅವರ ಸಾಧನೆ ಏನು ಎಂದು ಜನರಿಗೆ ಗೊತ್ತಿದೆ. ಚುನಾವಣೆಯಲ್ಲಿ ರವೀಂದ್ರ ಶ್ರೀಕಂಠಯ್ಯಗೆ ಜನ ಪಾಠ ಕಲಿಸಲಿದ್ದಾರೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular