HomeKarnatakaBIG NEWS: ನಾಮಪತ್ರ ಸಲ್ಲಿಕೆ ವೇಳೆ ಸಂಘರ್ಷ; ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ

BIG NEWS: ನಾಮಪತ್ರ ಸಲ್ಲಿಕೆ ವೇಳೆ ಸಂಘರ್ಷ; ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ

ಮಂಗಳೂರು: ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಮಾತ್ರ ಬಾಕಿಯಿದ್ದು, ಇಂದು ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಂಘರ್ಷ ನಡೆದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ನಾಮಪತ್ರ ಸಲ್ಲಿಸಲು ಅಪಾರ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಕಾರ್ಯಕರ್ತರ ಜೊತೆ ಶಕ್ತಿ ಪ್ರದರ್ಶನ ನಡೆಸಿದ್ದಾರೆ. ಉಬಯ ಪಕ್ಷದ ನಾಯಕರು ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸಲು ತೆರಳಿದ್ದಾರೆ ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ಆರಂಭವಾಗಿದೆ.

ಉದ್ರಿಕ್ತರು ಹರೀಶ್ ಪೂಂಜಾ ಕಾರಿನ ಗಾಜನ್ನು ಪುಡಿ ಪುಡಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular