HomeKarnatakaBIG NEWS: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಸೇರಿ 12 ಕ್ಷೇತ್ರಗಳಿಗೆ ಇಂದೇ ಬಿಜೆಪಿ ಅಭ್ಯರ್ಥಿಗಳ ಪ್ರಕಟ; ಕೇಂದ್ರ...

BIG NEWS: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಸೇರಿ 12 ಕ್ಷೇತ್ರಗಳಿಗೆ ಇಂದೇ ಬಿಜೆಪಿ ಅಭ್ಯರ್ಥಿಗಳ ಪ್ರಕಟ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರ ಸೇರಿದಂತೆ ಬಾಕಿ ಉಳಿದ 12 ಕ್ಷೇತ್ರಗಳಿಗೆ ಇಂದೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಬಾಕಿ ಇರುವ 12 ಕ್ಷೇತ್ರಗಳಿಗೆ ಇಂದೇ ಅಭ್ಯರ್ಥಿಗಳನ್ನು ಪ್ರಕಟಿಸಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಚುನಾವಣಾ ರ್ಯಾಲಿ ನಡೆಯಲಿದೆ. ಎಲ್ಲೆಲ್ಲಿ ರ್ಯಾಲಿ ನಡೆಯಲಿದೆ ಎಂಬುದು ಏಪ್ರಿಲ್ 12ರಂದು ಫೈನಲ್ ಆಗಲಿದೆ ಎಂದರು.

 

For Latest News Updates, Join Our Whatsapp Community🚩
RELATED ARTICLES

Most Popular