HomeKarnatakaBIG NEWS: ಮೇ 4 ರಂದು ರಾಜ್ಯಕ್ಕೆ ಮೋದಿ, ಸಿಎಂ ಯೋಗಿ ಆದಿತ್ಯನಾಥ್ ಎಂಟ್ರಿ

BIG NEWS: ಮೇ 4 ರಂದು ರಾಜ್ಯಕ್ಕೆ ಮೋದಿ, ಸಿಎಂ ಯೋಗಿ ಆದಿತ್ಯನಾಥ್ ಎಂಟ್ರಿ

ಕರ್ನಾಟಕ ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದ್ದು ಪ್ರಧಾನಿ ನರೇಂದ್ರ ಮೋದಿ ಅಖಾಡಕ್ಕಿಳಿಯಲಿದ್ದಾರೆ.

ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮೇ 4 ರಂದು ಉಡುಪಿಗೆ ಆಗಮಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕರ್ನಾಟಕದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಡುಪಿ ನಗರ ಅಥವಾ ಸೂಕ್ತವಾದ ಸ್ಥಳಗಳಲ್ಲಿ ಬೃಹತ್ ಕಾರ್ಯಕ್ರಮವನ್ನು ಏರ್ಪಡಿಸಲಾಗುತ್ತದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಪ್ರಧಾನಿ ಮೋದಿ ಅವರೊಂದಿಗೆ ಬರುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

For Latest News Updates, Join Our Whatsapp Community🚩
RELATED ARTICLES

Most Popular