HomeKarnatakaBIG NEWS: ಜಗದೀಶ್ ಶೆಟ್ಟರ್ ದುಡುಕಿನ ನಿರ್ಧಾರ ಎಂದ ಸಚಿವ ಸುನೀಲ್ ಕುಮಾರ್

BIG NEWS: ಜಗದೀಶ್ ಶೆಟ್ಟರ್ ದುಡುಕಿನ ನಿರ್ಧಾರ ಎಂದ ಸಚಿವ ಸುನೀಲ್ ಕುಮಾರ್

ಉಡುಪಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗಿರುವ ವಿಚಾರವಾಗಿ ಮಾತನಾಡಿದ ಇಂಧನ ಸಚಿವ ಸುನೀಲ್ ಕುಮಾರ್, ಯಾವ ನಿರೀಕ್ಷೆ ಇಟ್ಟುಕೊಂಡು ಕಾಂಗ್ರೆಸ್ ಸೇರಿದ್ದಾರೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜಗದೀಶ್ ಶೆಟ್ಟರ್ ನಿಲುವಿನ ಬಗ್ಗೆ ಮಾತನಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ಶೆಟ್ಟರ್ ಗೆ ಬಿಜೆಪಿ ಎಲ್ಲಾ ರೀತಿಯ ಅವಕಾಶ ನೀಡಿತ್ತು ಅವಕಾಶ ಸಿಗದಿದ್ದಾಗ ಪಕ್ಷಾಂತರ ಮಾಡುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.

ಜಗದೀಶ್ ಶೆಟ್ಟರ್ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ. ಯಾವ ನಿರೀಕ್ಷೆ ಇಟ್ಟುಕೊಂಡು ಕಾಂಗ್ರೆಸ್ ಸೇರಿದ್ದಾರೆ ಗೊತ್ತಿಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular