HomeKarnatakaBIG NEWS: ಪರೋಕ್ಷವಾಗಿ ಶಾಸಕ ರಾಮದಾಸ್ ಗೆ ಕಾಂಗ್ರೆಸ್ ಗೆ ಆಹ್ವಾನಿಸಿದ ಸಿದ್ದರಾಮಯ್ಯ

BIG NEWS: ಪರೋಕ್ಷವಾಗಿ ಶಾಸಕ ರಾಮದಾಸ್ ಗೆ ಕಾಂಗ್ರೆಸ್ ಗೆ ಆಹ್ವಾನಿಸಿದ ಸಿದ್ದರಾಮಯ್ಯ

ಮೈಸೂರು: ರಾಜ್ಯ ಬಿಜೆಪಿಯಲ್ಲಿ ಹಿರಿಯ ನಾಯಕರನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ಆ ಸಾಲಿನಲ್ಲಿ ಶಾಸಕ ಎಸ್.ಎ.ರಾಮದಾಸ್ ಅವರೂ ಕೂಡ ಒಬ್ಬರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಒಬ್ಬರ ಹಿಡಿತದಲ್ಲಿದೆ ಎಂಬ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ ಸರಿಯಿದೆ. ಬಿಜೆಪಿಯಲ್ಲಿ ಹಿರಿಯರನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಹೇಳಿದರು.

ಆ ಸಾಲಿನಲ್ಲಿ ಎಸ್ ಎ.ರಾಮದಾಸ್ ಕೂಡ ಇದ್ದಾರೆ. ಹಿರಿಯ ಶಾಸಕರಾಗಿರುವ ಎಸ್.ಎ.ರಾಮದಾಸ್ ಅವರಿಗೂ ಬಿಜೆಪಿ ಟಿಕೆಟ್ ಕೈತಪ್ಪಿದೆ. ನಮ್ಮ ಪಕ್ಷದ ತತ್ವ-ಸಿದ್ಧಾಂತಗಳನ್ನು ಒಪ್ಪಿ ಯಾರೇ ಬಂದರೂ ಪಕ್ಷಕ್ಕೆ ಸ್ವಾಗತ ಎಂದರು. ಈ ಮೂಲಕ ಸಿದ್ದರಾಮಯ್ಯ ಪರೋಕ್ಷವಾಗಿ ರಾಮದಾಸ್ ಅವರಿಗೆ ಕಾಂಗ್ರೆಸ್ ಗೆ ಆಹ್ವಾನ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular