HomeKarnatakaBIG NEWS: ಕಾಂಗ್ರೆಸ್ ಲಿಂಗಾಯಿತರನ್ನು ಸಿಎಂ ಅಭ್ಯರ್ಥಿಯನ್ನಾಗಿ ಘೋಷಿಸಲಿ; ಕೈ ನಾಯಕರಿಗೆ ನಳಿನ್ ಕುಮಾರ್...

BIG NEWS: ಕಾಂಗ್ರೆಸ್ ಲಿಂಗಾಯಿತರನ್ನು ಸಿಎಂ ಅಭ್ಯರ್ಥಿಯನ್ನಾಗಿ ಘೋಷಿಸಲಿ; ಕೈ ನಾಯಕರಿಗೆ ನಳಿನ್ ಕುಮಾರ್ ಕಟೀಲು ಸವಾಲು

ಮಂಗಳೂರು: ಲಿಂಗಾಯಿತ ಸಿಎಂ ಹೇಳಿಕೆ ವಿಚಾರವನ್ನು ಪುನರುಚ್ಛರಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ನಾವು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮಾರ್ಗದರ್ಶನ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ ಎಂದು ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಎಲ್ಲಾ ಸಂದರ್ಭಗಳಲ್ಲಿ ಬಿಜೆಪಿ ಮಾತ್ರ ಲಿಂಗಾಯಿತರನ್ನು ಮುಖ್ಯಮಂತ್ರಿ ಮಾಡುತ್ತದೆ. ಬೇರೆ ಪಕ್ಷಕ್ಕೆ ಆ ತಾಕತ್ತಿಲ್ಲ. ಇದ್ದರೆ ಘೋಷಣೆ ಮಾಡಲಿ. ಕಾಂಗ್ರೆಸ್ ನಾಯಕರು ಲಿಂಗಾಯಿತರನ್ನು ಸಿಎಂ ಅಭ್ಯರ್ಥಿಎಂದು ಘೋಷಿಸಲಿ ಎಂದು ಸವಾಲು ಹಾಕಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಗೆ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಕೊರತೆ ಇದೆ. ಡಿಸೆಂಬರ್ ನಲ್ಲಿಯೇ ಅವರು ಆಯ್ಕೆ ಪ್ರಕ್ರಿಯೆ ಆರಂಭಿಸಿದರೂ ಈವರೆಗೂ ಆಗಿಲ್ಲ, ನಮ್ಮ ಬಂಡುಕೋರರಾಗಿ ಹೊರ ಬರುವವರಿಗಾಗಿ ಕಾಯುತ್ತಿದ್ದಾರೆ. ಕಾಂಗ್ರೆಸ್ ಹೀನಾಯ ಸ್ಥಿತಿ ನೋಡಿ ಬೇಜಾರಾಗುತ್ತಿದೆ ಎಂದು ವ್ಯಂಗ್ಯವಾಡಿದರು.

For Latest News Updates, Join Our Whatsapp Community🚩
RELATED ARTICLES

Most Popular