HomeKarnatakaBIG NEWS: ಜಗದೀಶ್ ಶೆಟ್ಟರ್ ಆರೋಪಗಳು ಸುಳ್ಳು; ಕಾಂಗ್ರೆಸ್ ಹೇಗೆ ನಡೆಸಿಕೊಳ್ಳುತ್ತೆ ನೋಡ್ತೀವಿ; ಮಾಜಿ...

BIG NEWS: ಜಗದೀಶ್ ಶೆಟ್ಟರ್ ಆರೋಪಗಳು ಸುಳ್ಳು; ಕಾಂಗ್ರೆಸ್ ಹೇಗೆ ನಡೆಸಿಕೊಳ್ಳುತ್ತೆ ನೋಡ್ತೀವಿ; ಮಾಜಿ ಸಿಎಂಗೆ ಬಿಜೆಪಿ ರಾಜ್ಯಾಧ್ಯಕ್ಷ ತಿರುಗೇಟು

ಮಂಗಳೂರು: ನನಗೆ ಬಿಜೆಪಿ ಟಿಕೆಟ್ ಕೈತಪ್ಪಲು ಬಿ.ಎಲ್.ಸಂತೋಷ್ ಕಾರಣ ಎಂಬ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪ ಸುಳ್ಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಜಗದೀಶ್ ಶೆಟ್ಟರ್ ಬಿ.ಎಲ್.ಸಂತೋಷ್ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ಯಾರೋ ಒಬ್ಬರ ನಿರ್ಣಯದಂತೆ ನಮ್ಮಲ್ಲಿ ಅಭ್ಯರ್ಥಿ ಆಯ್ಕೆಯಾಗುವುದಿಲ್ಲ ಒಮ್ಮತದ ಅಭಿಪ್ರಾಯದ ಮೇಲೆ ಚುನವಣಾ ಪ್ರಕ್ರಿಯೆ ನಡೆಯುತ್ತದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಗದೀಶ್ ಶೆಟ್ಟರ್ ಪಕ್ಷದ ಅಧ್ಯಕ್ಷರಾಗಿದ್ದವರು ಅವರಿಗೆ ಸಾಮೂಹಿಕ ನಾಯಕತ್ವದ ಬಗ್ಗೆ ಗೊತ್ತಿದೆ. ಪಕ್ಷದಿಂದ ಹೊರ ಹೋಗಿ ಮಾತನಾಡುವುದು ಶೋಭೆ ತರುವುದಿಲ್ಲ ಎಂದು ಗುಡುಗಿದ್ದಾರೆ.

ಬಿ.ಎಲ್.ಸಂತೋಷ್ ಅವರು ಪಕ್ಷದ ಸಂಘಟಕರಾಗಿದ್ದಾರೆ. ಅಭ್ಯರ್ಥಿಗಳ ಆಯ್ಕೆಯನ್ನು ನಮ್ಮಲ್ಲಿ ಸಂಸದೀಯ ಮಂಡಳಿ, ಎಲೆಕ್ಷನ್ ಕಮಿಟಿ ಮೂಲಕ ಮಾಡಲಾಗುತ್ತದೆ. ರಾಷ್ಟ್ರದಲ್ಲಿ ನಮ್ಮ ಪಕ್ಷಕ್ಕೆ ಅದರದ್ದೇ ಆದ ಕೆಲವು ನಿಯಮಗಳಿವೆ. ಶೆಟ್ಟರ್ ಮಾನಸಿಕವಾಗಿ ಯಾವುದೋ ಕಾರಣಕ್ಕೆ ಪಕ್ಷ ತೊರೆದಿದ್ದಾರೆ. ರಾಷ್ಟ್ರೀಯ ನಾಯಕರು ಮನೆ ಬಾಗಿಲಿಗೆ ಹೋದರೂ ಗೌರವ ಕೊಡಲಿಲ್ಲ. ಅವರನ್ನು ಕಾಂಗ್ರೆಸ್ ಹೇಗೆ ನಡೆಸಿಕೊಳ್ಳುತ್ತೆ ಎಂಬುದನ್ನು ಕಾದು ನೋಡ್ತೀವಿ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular