HomeKarnatakaಶೆಟ್ಟರ್, ಸವದಿ ಸೆಳೆದ ಕಾಂಗ್ರೆಸ್ ಗೆ ಬಿಜೆಪಿ ಶಾಕ್...? ಪ್ರಭಾವಿ ನಾಯಕ ಎಸ್.ಆರ್. ಪಾಟೀಲ್ ಕರೆ...

ಶೆಟ್ಟರ್, ಸವದಿ ಸೆಳೆದ ಕಾಂಗ್ರೆಸ್ ಗೆ ಬಿಜೆಪಿ ಶಾಕ್…? ಪ್ರಭಾವಿ ನಾಯಕ ಎಸ್.ಆರ್. ಪಾಟೀಲ್ ಕರೆ ತರಲು ಪ್ರಯತ್ನ

ಬೆಂಗಳೂರು: ಉತ್ತರ ಕರ್ನಾಟಕದ ಲಿಂಗಾಯಿತ ಸಮುದಾಯದ ಪ್ರಭಾವಿ ನಾಯಕರಾದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ಸೆಳೆದ ಕಾಂಗ್ರೆಸ್ ಗೆ ಶಾಕ್ ನೀಡಲು ಬಿಜೆಪಿ ಸಿದ್ಧತೆ ಕೈಗೊಂಡಿದೆ.

ಟಿಕೆಟ್ ದೊರಕದ ಕಾರಣ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನಗೊಂಡಿರುವ ಮಾಜಿ ಸಚಿವ, ವಿಧಾನ ಪರಿಷತ್ ಮಾಜಿ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್ ಅವರನ್ನು ಬಿಜೆಪಿಗೆ ಆಹ್ವಾನಿಸಲು ಪ್ರಯತ್ನ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಗಲಕೋಟೆ ಜಿಲ್ಲೆಯ ಬೀಳಗಿ ಮತ್ತು ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಕ್ಷೇತ್ರದಿಂದ ಮಾಜಿ ಸಚಿವ ಎಸ್.ಆರ್. ಪಾಟೀಲ್ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಎರಡೂ ಕ್ಷೇತ್ರಗಳಲ್ಲಿ ಅವರಿಗೆ ಟಿಕೆಟ್ ಕೈತಪ್ಪಿದೆ. ಇದರಿಂದ ಅಸಮಾಧಾನಗೊಂಡಿದ್ದ ಎಸ್.ಆರ್. ಪಾಟೀಲ್ ಅವರನ್ನು ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಸಂಪರ್ಕಿಸಿ ಮಾತುಕತೆ ನಡೆಸಿದ್ದಾರೆ. ಈ ಮೂಲಕ ಕಾಂಗ್ರೆಸ್ ನ ಪ್ರಭಾವಿ ನಾಯಕನನ್ನು ಬಿಜೆಪಿಗೆ ಸೆಳೆದು ಕಾಂಗ್ರೆಸ್ ಗೆ ಶಾಕ್ ನೀಡಲು ಬಿಜೆಪಿ ನಾಯಕರು ಪ್ರಯತ್ನ ನಡೆಸಿದ್ದಾರೆ .

ಚಿವ ಮುರುಗೇಶ್ ನಿರಾಣಿ ಬಿಜೆಪಿ ಸೇರುವಂತೆ ಎಸ್.ಆರ್. ಪಾಟೀಲರನ್ನು ಆಹ್ವಾನಿಸಿದ್ದು, ಅವರು ಎರಡು ದಿನ ಸಮಯ ಕೇಳಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular