ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಭರದಿಂದ ಸಾಗಿದ್ದು, ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಬೃಹತ್ ರೋಡ್ ಶೋ ನಡೆಸಿ ಸಹಸ್ರಾರು ಬೆಂಬಲಿಗರ ಸಮ್ಮುಖದಲ್ಲಿ ತಮ್ಮ ನಾಮಪತ್ರ ಸಲ್ಲಿಸುತ್ತಿದ್ದಾರೆ.
ಇದರ ಮಧ್ಯೆ ಕೆಲ ಪಕ್ಷೇತರ ಅಭ್ಯರ್ಥಿಗಳು ವಿಭಿನ್ನವಾಗಿ ತಮ್ಮ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದು, ಯಾದಗಿರಿ ಮತಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಯಂಕಪ್ಪ ಎಂಬವರು 10,000 ರೂಪಾಯಿ ಠೇವಣಿ ಹಣವನ್ನು ನಾಣ್ಯಗಳಲ್ಲಿಯೇ ಪಾವತಿಸಿ ಎಲ್ಲರ ಗಮನ ಸೆಳೆದಿದ್ದರು.
ಶಿವಮೊಗ್ಗ ಜಿಲ್ಲೆ ಸೊರಬ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಾಮಾಜಿಕ ಹೋರಾಟಗಾರ ಜೆ.ಎಸ್. ಚಿದಾನಂದ ಗೌಡ ತಮ್ಮ ನಾಮಪತ್ರ ಸಲ್ಲಿಕೆಗೂ ಮುನ್ನ ಅಲಂಕೃತ ಎತ್ತಿನ ಗಾಡಿಯಲ್ಲಿ ಆಗಮಿಸಿದ್ದಾರೆ.
ಸೊರಬದ ರಂಗನಾಥ ಸ್ವಾಮಿ ಸನ್ನಿಧಿಯಲ್ಲಿ ತಮ್ಮ ಬೆಂಬಲಿಗರು ಹಾಗೂ ಆಪ್ತರೊಂದಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮುಖ್ಯ ರಸ್ತೆ ಮಾರ್ಗವಾಗಿ ತಾಲೂಕು ಕಚೇರಿವರೆಗೆ ಎತ್ತಿನಗಾಡಿಯಲ್ಲಿ ಚಿದಾನಂದ ಗೌಡ ಮೆರವಣಿಗೆ ನಡೆಸಿದ್ದಾರೆ.