HomeKarnatakaನಾಮಪತ್ರ ಸಲ್ಲಿಕೆ ಕೊನೆ ಕ್ಷಣದಲ್ಲಿ ಅಭ್ಯರ್ಥಿಗೆ ಕೈಕೊಟ್ಟ ಜೆಡಿಎಸ್: ಮುನ್ನಾಭಾಯ್ ಬದಲು ಅನಿಲ್ ಲಾಡ್ ಗೆ...

ನಾಮಪತ್ರ ಸಲ್ಲಿಕೆ ಕೊನೆ ಕ್ಷಣದಲ್ಲಿ ಅಭ್ಯರ್ಥಿಗೆ ಕೈಕೊಟ್ಟ ಜೆಡಿಎಸ್: ಮುನ್ನಾಭಾಯ್ ಬದಲು ಅನಿಲ್ ಲಾಡ್ ಗೆ ಬಿ ಫಾರಂ

ಬೆಂಗಳೂರು: ಬಳ್ಳಾರಿ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮುನ್ನಾಭಾಯ್ ಅವರ ಮಾಜಿ ಶಾಸಕ ಅನಿಲ್ ಲಾಡ್ ಅವರಿಗೆ ಜೆಡಿಎಸ್ ಟಿಕೆಟ್ ನೀಡಲಾಗಿದೆ.

ಇಂದು ನಾಮಪತ್ರ ಸಲ್ಲಿಸಲು ಮುನ್ನಾಭಾಯ್ ಸಿದ್ಧತೆ ಮಾಡಿಕೊಂಡಿದ್ದರು. ಕೊನೆ ಕ್ಷಣದಲ್ಲಿ ಜೆಡಿಎಸ್ ಮುನ್ನಾಭಾಯ್ ಗೆ ಕೈ ಕೊಟ್ಟಿದ್ದು ಅನಿಲ್ ಲಾಡ್ ಅವರಿಗೆ ಬಿ ಫಾರಂ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳ್ಳಾರಿ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅನಿಲ್ ಲಾಡ್ ಟಿಕೆಟ್ ತಪ್ಪಿದ ಹಿನ್ನಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಹೇಳಿದ್ದರು. ಇದರ ಬೆನ್ನಲ್ಲೇ ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಮತ್ತು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಬಿ ಫಾರಂ ಕೂಡ ಪಡೆದುಕೊಂಡಿದ್ದಾರೆ. ಚುನಾವಣೆ ತಯಾರಿ ಮಾಡಿಕೊಂಡಿದ್ದ ಮುನ್ನಾಭಾಯ್ ಗೆ ಭಾರಿ ನಿರಾಸೆಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular