HomeKarnatakaBIG NEWS: ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ನಾಯಕರಿಗೆ IT ಶಾಕ್; ಕೆಜಿಎಫ್ ಬಾಬು ನಿವಾಸ ಸೇರಿ...

BIG NEWS: ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ನಾಯಕರಿಗೆ IT ಶಾಕ್; ಕೆಜಿಎಫ್ ಬಾಬು ನಿವಾಸ ಸೇರಿ ಹಲವೆಡೆ ದಾಳಿ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದು, ರಾಜಕೀಯ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದರೆ ಇತ್ತ ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ಐಟಿ ದಾಳಿ ನಡೆದಿದೆ.

ಬೆಂಗಳೂರಿನಲ್ಲಿ ಕೆಜಿಎಫ್ ಬಾಬು ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೈಗ್ರೌಂಡ್ಸ್ ಬಳಿಯಿರುವ ರುಕ್ಸಾನಾ ಪ್ಯಾಲೇಸ್ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ 50 ಕಡೆಗಳಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ.

ಮಂಗಳೂರು, ಮೈಸೂರಿನಲ್ಲಿ ಕಾಂಗ್ರೆಸ್ ಮುಖಂಡರ ಮನೆಗಳ ಮೇಲೆ ಕೂಡ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular