ಬೆಂಗಳೂರು: ಕಂದಾಯ ಸಚಿವ ಆರ್. ಅಶೋಕ್ ಅವರನ್ನು ಅವರದ್ದೇ ಸ್ವಕ್ಷೇತ್ರದಲ್ಲಿ ಸೋಲಿಸಲು ಕಾಂಗ್ರೆಸ್ ರಣತಂತ್ರ ರೂಪಿಸಿದ್ದು, ಸಂಸದ ಡಿ.ಕೆ.ಸುರೇಶ್ ಅವರನ್ನು ಕಣಕ್ಕಿಳಿಸಲು ಮುಂದಾಗಿದೆ.
ಈಗಾಗಲೇ ಪದ್ಮನಾಭನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ರಘುನಾಥ್ ನಾಯ್ಡು ಕಣಕ್ಕಿಳಿದಿದ್ದು, ಅಭ್ಯರ್ಥಿ ಬದಲಾವಣೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದು, ಪದ್ಮನಾಭನಗರದಲ್ಲಿ ನಮ್ಮ ಅಭ್ಯರ್ಥಿ ರಘುನಾಥ್ ನಾಯ್ಡು ಗೆಲ್ಲುವ ವಾತಾವರಣವಿದೆ. ಅವರ ಜೊತೆಗೆ ಡಿ.ಕೆ. ಸುರೇಶ್ ಕೂಡ ನಾಮಪತ್ರ ಸಲ್ಲಿಸುತ್ತಾರೆ ಎಂದರು.
ಪದ್ಮನಾಭನಗರದಿಂದ ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಾರೆ. ರಘುನಾಥ್ ನಾಯ್ಡು ಅವರು ನಾಮಪತ್ರ ಸಲ್ಲಿಸುತ್ತಾರೆ. ಅವರ ಜೊತೆ ಡಿ.ಕೆ. ಸುರೇಶ್ ಕೂಡ ನಾಮಪತ್ರ ಸಲ್ಲಿಸಲಿದ್ದಾರೆ. ಮುಂದಿನದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದರು.
ಬಿಜೆಪಿ-ಜೆಡಿಎಸ್ ನವರು ಚೆಸ್ ಆಟ ಆಡ್ತಿದ್ದಾರೆ. ನಾವೂ ಕೂಡ ಚೆಸ್ ಆಡ್ತೀವಿ ನೊಡೋಣ ಎಂದು ಸವಾಲು ಹಾಕಿದರು.