HomeKarnatakaBIG NEWS: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5 ಕೋಟಿ ಮೌಲ್ಯದ ಚಿನ್ನ ಜಪ್ತಿ

BIG NEWS: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5 ಕೋಟಿ ಮೌಲ್ಯದ ಚಿನ್ನ ಜಪ್ತಿ

ಧಾರವಾಡ: ದಾಖಲೆ ಇಲ್ಲದೇ ಸಾಗಾಟ ಮಾಡುತ್ತಿದ್ದ ಬರೋಬ್ಬರಿ 5 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನವನ್ನು ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ಜಪ್ತಿ ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡ ತಾಲೂಕಿನ ತೇಗೂರು ಚೆಕ್ ಪೋಸ್ಟ್ ನಲ್ಲಿ ವಾಹನವನ್ನು ತಪಾಸಣೆ ನಡೆಸಿದಾಗ ದಾಖಲೆ ಇಲ್ಲದ 7 ಕೆಜಿ 7 ಗ್ರಾಂ ಚಿನ್ನ ಪತ್ತೆಯಾಗಿದ್ದು, ಸುಮಾರು 5 ಕೋಟಿಗೂ ಹೆಚ್ಚು ಮೌಲ್ಯದ್ದಾಗಿದೆ ಎಂದು ತಿಳಿದುಬಂದಿದೆ.

ಬಿವಿಸಿ ಎಂಬ ಹೆಸರಿನ ಲಾಜೆಸ್ಟಿಕ್ ವಾಹನದಲ್ಲಿ ಬೆಳಗಾವಿಯಿಂದ ಬೆಂಗಳೂರಿನ ಕಡೆಗೆ ಚಿನ್ನವನ್ನು ಕೊಂಡೊಯ್ಯಲಾಗುತ್ತಿತ್ತು. ಪ್ರತಿಷ್ಠಿತ ಚಿನ್ನದ ಅಂಗಡಿಗಳಿಗೆ ಸೇರಿದ ಚಿನ್ನ ಇದಾಗಿದ್ದು, ದಾಖಲೆ ಇಲ್ಲದೇ ಸಾಗಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿದೆ. ಆದಾಯ ಹಾಗೂ ತೆರಿಗೆ ಇಲಾಖೆಗೆ ಪೊಲೀಸರು ಮಾಹಿತಿ ರವಾನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular