
ಶಿಗ್ಗಾಂವಿಯಲ್ಲಿ ಭರ್ಜರಿ ರೋಡ್ ಶೋ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಶಿಗ್ಗಾಂವಿ ಕ್ಷೇತ್ರದಲ್ಲಿ 100ಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸಿದ್ದೇನೆ. ನಾನು ಮುಖ್ಯಮಂತ್ರಿಯಾಗಿ ವಿದ್ಯಾರ್ಥಿಗಳಿಗೆ, ರೈತರಿಗೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದೇನೆ. ಈ ಬಾರಿಯೂ ಕ್ಷೇತ್ರದ ಜನರು ಅತಿ ಹೆಚ್ಚು ಮತಗಳಿಂದ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.
ಸಿಎಂ ಕ್ಷೇತ್ರ ಬದಲಾವಣೆ ಮಾಡುತ್ತಾರೆ ಎಂಬ ಸುದ್ದಿ ಹರಡಿತ್ತು. ನಾನು ಓಡಿ ಹೋಗುವ ಮುಖ್ಯಮಂತ್ರಿಯಲ್ಲ. ನನ್ನ ಕೊನೆ ಉಸಿರುವವರೆಗೂ ಶಿಗ್ಗಾಂವಿ ಕ್ಷೇತ್ರದ ಜನರ ಸೇವೆ ಮಾಡುತ್ತೇನೆ. ನನ್ನ ಸಾವಿನ ಬಳಿಕ ನನ್ನನ್ನು ಶಿಗ್ಗಾಂವಿಯಲ್ಲೇ ಮಣ್ಣು ಮಾಡಬೇಕು ಎಂದು ಹೇಳಿದರು.

