HomeKarnatakaBIG NEWS: ಮಂಡ್ಯದಿಂದ ಸ್ಪರ್ಧಿಸಲು ನಾನೇನು ಟೂರಿಂಗ್ ಟಾಕೀಸಾ ? HDK ಕಿಡಿ

BIG NEWS: ಮಂಡ್ಯದಿಂದ ಸ್ಪರ್ಧಿಸಲು ನಾನೇನು ಟೂರಿಂಗ್ ಟಾಕೀಸಾ ? HDK ಕಿಡಿ

ಚಿತ್ರದುರ್ಗ: ಮಂಡ್ಯದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಈಗಾಗಲೇ ಹಲವು ಬಾರಿ ಸ್ಪಷ್ಟ ಪಡಿಸಿದ್ದೇನೆ. ಮಂಡ್ಯದಲ್ಲಿ ಸಾಕಷ್ಟು ಆಕಾಂಕ್ಷಿಗಳು, ಸಮರ್ಥರು ಇದ್ದಾರೆ. ಆದರೂ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧಿಸುತ್ತಾರೆ ಎಂಬ ಗೊಂದಲ ಸೃಷ್ಟಿಸುವ ಕೆಲಸ ನಡೆದಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ, ಸಧ್ಯಕ್ಕೆ ಮಂಡ್ಯದಿಂದ ನನ್ನ ಸ್ಪರ್ಧೆ ಅನಿವಾರ್ಯತೆ ಇಲ್ಲ. ನಾನು ಈ ಬಾರಿ ಚನ್ನಪಟ್ಟಣ ಒಂದೇ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ಮಂಡ್ಯದಲ್ಲಿ ಸಮರ್ಥ ಅಭ್ಯರ್ಥಿಗಳಿದ್ದಾರೆ. ಮಂಡ್ಯದಿಂದ ಸ್ಪರ್ಧೆ ಮಾಡುತ್ತೇನೆ ಎಂದು ನಾನು ಯಾವತ್ತೂ ಹೇಳಿಲ್ಲ ಎಂದು ಸಂಸದೆ ಸುಮಲತಾ ಹೇಳಿಕೆಗೆ ಪರೋಕ್ಷ ತಿರುಗೇಟು ನೀಡಿದರು.

ಮಂಡ್ಯದಲ್ಲಿ ನಾನು ಯಾಕೆ ಸ್ಪರ್ಧೆ ಮಾಡಬೇಕು? ಮಂಡ್ಯದಲ್ಲಿ ಸ್ಪರ್ಧಿಸಲು ನಾನೇನು ಟೂರಿಂಗ್ ಟಾಕೀಸಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ರಾಜಕೀಯದಲ್ಲಿ ದಿನಕ್ಕೊಂದು ಅಚ್ಚರಿ ಬೆಳವಣಿಗೆ ನಡೆಯುತ್ತಿದೆ. ಪಕ್ಷದಿಂದ ಪಕ್ಷಕ್ಕೆ ಜಂಪ್ ಮಾಡುವವರು ಹೆಚ್ಚಾಗುತ್ತಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಜೆಡಿಎಸ್ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular