ನವದೆಹಲಿ: ಕೃಷಿ ಮತ್ತು ರೈತರ ಕಲ್ಯಾಣ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು SATHI ಪೋರ್ಟಲ್ ಮತ್ತು ಮೊಬೈಲ್ ಅಪ್ಲಿಕೇಶನ್ ಗೆ ಚಾಲನೆ ನೀಡಿದ್ದಾರೆ.
ಬೀಜ ಉತ್ಪಾದನೆ, ಗುಣಮಟ್ಟದ ಬೀಜ ಗುರುತಿಸುವಿಕೆ ಮತ್ತು ಬೀಜ ಪ್ರಮಾಣೀಕರಣದ ಸವಾಲುಗಳನ್ನು ಎದುರಿಸಲು SATHI(ಬೀಜ ಪತ್ತೆಹಚ್ಚುವಿಕೆ, ದೃಢೀಕರಣ ಮತ್ತು ಹೋಲಿಸ್ಟಿಕ್ ಇನ್ವೆಂಟರಿ) ಪೋರ್ಟಲ್ ಮತ್ತು ಮೊಬೈಲ್ ಅಪ್ಲಿಕೇಶನ್ ಅನ್ನು ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಇಂದು ಪ್ರಾರಂಭಿಸಿದರು.
ಇದನ್ನು ಉತ್ತಮ್ ಬೀಜ್ – ಸಮೃದ್ಧ್ ಕಿಸಾನ್ ಎಂಬ ವಿಷಯದ ಮೇಲೆ ಅಭಿವೃದ್ಧಿಪಡಿಸಲಾಗಿದೆ. ಈ ಸಂದರ್ಭದಲ್ಲಿ ಸಚಿವರು ಮಾತನಾಡಿ, ಸರ್ಕಾರವು ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳ ಮೂಲಕ ಕೃಷಿ ಕ್ಷೇತ್ರ ಎದುರಿಸುತ್ತಿರುವ ಸವಾಲುಗಳು ಮತ್ತು ತೊಂದರೆಗಳನ್ನು ನಿವಾರಿಸಲು ನಿರಂತರವಾಗಿ ಪ್ರಯತ್ನಿಸುತ್ತಿದೆ ಎಂದರು.
ಸತಿ ಪೋರ್ಟಲ್ ಒಂದು ಕ್ರಾಂತಿಕಾರಿ ಹೆಜ್ಜೆಯಾಗಿದೆ. ಕೃಷಿಯಲ್ಲಿ ಬೀಜಗಳು, ಕೀಟನಾಶಕಗಳು, ರಸಗೊಬ್ಬರಗಳು ಮತ್ತು ನೀರಾವರಿ ಪ್ರಮುಖ ಪಾತ್ರ ವಹಿಸುತ್ತದೆ. ಕಳಪೆ ಗುಣಮಟ್ಟದ ಅಥವಾ ನಕಲಿ ಬೀಜಗಳು ಕೃಷಿಯ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತವೆ ಮತ್ತು ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರುತ್ತದೆ ಹೀಗಾಗಿ ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.