HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; ಒಂದೇ ದಿನದಲ್ಲಿ 12,500ಕ್ಕೂ ಹೆಚ್ಚು ಜನರಲ್ಲಿ...

BIG NEWS: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; ಒಂದೇ ದಿನದಲ್ಲಿ 12,500ಕ್ಕೂ ಹೆಚ್ಚು ಜನರಲ್ಲಿ ಸೋಂಕು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆಯಾಗಿದೆ. ಒಂದೇ ದಿನದಲ್ಲಿ 12 ಸಾವಿರಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 12,591 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ದೇಶದಲ್ಲಿ ಈವರೆಗೆ 5,31,230 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 65,286 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,42,61,476 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 574 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,28,332 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 02,30,419 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular