HomeKarnatakaBIG NEWS: ಟಿಕೆಟ್ ಗಾಗಿ ಇನಾಯತ್ 2 ಕೋಟಿ ನೀಡಿದ್ದಾರೆ; ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಟಿಕೆಟ್...

BIG NEWS: ಟಿಕೆಟ್ ಗಾಗಿ ಇನಾಯತ್ 2 ಕೋಟಿ ನೀಡಿದ್ದಾರೆ; ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಟಿಕೆಟ್ ಮಾರಾಟ ಮಾಡಿದ್ದಾರೆ; ಮೊಯಿದ್ದೀನ್ ಬಾವಾ ಆರೋಪ

ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅಕಾಂಕ್ಷಿಯಾಗಿದ್ದ ಶಾಸಕ ಮೋಯಿದ್ದೀನ್ ಬಾವಾ ಅವರಿಗೆ ಟಿಕೆಟ್ ಕೈತಪ್ಪಿದ್ದು, ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಟಿಕೆಟ್ ಮಾರಾಟ ಮಾಡಿದ್ದಾರೆ. ಕಾಂಗ್ರೆಸ್ ಟಿಕೆಟ್ ಗಾಗಿ ಇನಾಯತ್ ಅಲಿ 2 ಕೋಟಿ ರೂಪಾಯಿ ಕೊಟ್ಟಿದ್ದಾರೆ. ಡಿಕೆಶಿ ಕೇಸ್ ನಲ್ಲಿ ಇನಾಯತ್ ಅಲಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. 6 ತಿಂಗಳ ಹಿಂದಷ್ಟೇ ಜಿಲ್ಲೆಗೆ ಬಂದ ಗುತ್ತಿಗೆದಾರನಿಗೆ ಟಿಕೆಟ್ ಮಾರಾಟ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ವಿರುದ್ಧ ಭ್ರಷ್ಟಾಚಾರ ಕುರಿತು ಮಾತನಾಡಲು ಕಾಂಗ್ರೆಸ್ ಗೆ ನೈತಿಕತೆ ಇಲ್ಲ. ವಾಮಮಾರ್ಗ ಉಪಯೋಗಿಸಿ ಕಾಂಗ್ರೆಸ್ ಟಿಕೆಟ್ ತಪ್ಪಿಸಿದ್ದಾರೆ ಎಂದು ಆರೋಪ ಮಾಡಿದರು.

For Latest News Updates, Join Our Whatsapp Community🚩
RELATED ARTICLES

Most Popular