HomeKarnatakaBIG NEWS: ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ದುರ್ಮರಣ

BIG NEWS: ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ದುರ್ಮರಣ

ತುಮಕೂರು: ವಿದ್ಯುತ್ ತಂತಿ ತಗುಲಿ ಬಾಲಕರಿಬ್ಬರು ಮೃತಪಟ್ಟಿರುವ ಘೋರ ಘಟನೆ ತುಮಕೂರು ಜಿಲ್ಲೆಯ ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಿತೀಶ್ (14), ಪ್ರಜ್ವಲ್ (13) ಮೃತ ಬಾಲಕರು. ಮಕ್ಕಳಿಬ್ಬರೂ ಮನೆಯಲ್ಲಿಯೇ ಆಟವಾಡುತ್ತಿದ್ದಾಗ ಈ ದುರಂತ ಸಂಭವಿಸಿದೆ. ಆಟವಾಡುತ್ತಿದ್ದ ಮಕ್ಕಳು ಮನೆ ಮೇಲೆ ಹಾದು ಹೋಗಿದ್ದ ಹೈಟೆನ್ಶನ್ ವಿದ್ಯುತ್ ತಂತಿಯನ್ನು ಮುಟ್ಟಿದ್ದು, ವಿದ್ಯುತ್ ಪ್ರವಹಿಸಿ ಬಾಲಕರು ಸಾವನ್ನಪ್ಪಿದ್ದಾರೆ.

ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular