HomeKarnatakaBIG NEWS: ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡ SMK ಸಹೋದರನ ಪುತ್ರ

BIG NEWS: ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡ SMK ಸಹೋದರನ ಪುತ್ರ

ಮಂಡ್ಯ ಜಿಲ್ಲೆ, ಮದ್ದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಸಹೋದರನ ಪುತ್ರ ಗುರು ಚರಣ್ ತಮಗೆ ಟಿಕೆಟ್ ಕೈ ತಪ್ಪುತ್ತಿದ್ದಂತೆ ಸಿಡಿದೆದ್ದಿದ್ದಾರೆ.

ಗುರು ಚರಣ್ ತಮ್ಮ ಬೆಂಬಲಿಗರ ಜೊತೆ ಈಗ ಜೆಡಿಎಸ್ ಸೇರ್ಪಡೆಗೊಂಡಿದ್ದು, ಮದ್ದೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಟಿಕೆಟ್ ನೀಡುವುದಾಗಿ ಮಾತು ಕೊಟ್ಟು ಡಿ.ಕೆ. ಶಿವಕುಮಾರ್ ನಮ್ಮ ಕುಟುಂಬಕ್ಕೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದುಡ್ಡು ಕೊಟ್ಟರೆ ಡಿ.ಕೆ. ಶಿವಕುಮಾರ್ ಟೆರರಿಸ್ಟ್ ಗೆ ಬೇಕಾದರೂ ಟಿಕೆಟ್ ನೀಡುತ್ತಾರೆ ಎಂದು ಆರೋಪಿಸಿದ ಗುರು ಚರಣ್, ಈ ಎಲ್ಲ ಕಾರಣಗಳಿಂದ ಬೇಸತ್ತು ಕಾಂಗ್ರೆಸ್ ತೊರೆದು ಬೇಷರತ್ತಾಗಿ ಜೆಡಿಎಸ್ ಸೇರ್ಪಡೆಯಾಗಿದ್ದೇನೆ ಎಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular