HomeKarnatakaBIG NEWS: ಮತ್ತೊಂದು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ

BIG NEWS: ಮತ್ತೊಂದು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಕಾಂಗ್ರೆಸ್ ಈಗಾಗಲೇ ಎಲ್ಲಾ 224 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಇದೀಗ ಕೊನೇ ಕ್ಷಣದಲ್ಲಿ ಮತ್ತೊಂದು ಕ್ಷೇತ್ರದ ಅಭ್ಯರ್ಥಿಯನ್ನು ಬದಲಿಸಿದೆ.

ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಬೆನ್ನಲ್ಲೇ ಈಗ ಮುಳಬಾಗಿಲು ಕ್ಷೇತ್ರದ ಅಭ್ಯರ್ಥಿಯನ್ನು ಬದಲಿಸಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ಕ್ಷೇತ್ರದ ಅಭ್ಯರ್ಥಿಯನ್ನಾಗಿ ನಿನ್ನೆ ಡಾ. ಬಿ.ಸಿ.ಗಂಗಾಧರ್ ಅವರನ್ನು ಕಣಕ್ಕಿಳಿಸಿತ್ತು. ಆದರೆ ಈಗ ಗಂಗಾಧರ್ ಬದಲಿಗೆ ಆದಿನಾರಾಯಣ ಎಂಬುವವರಿಗೆ ಟಿಕೆಟ್ ನೀಡಿದೆ.

ಮುದ್ದು ಗಂಗಾಧರ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದಕ್ಕೆ ಸ್ಥಳೀಯರಿಂದ ಭಾರಿ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಮುದ್ದು ಗಂಗಾಧರ್ ಅವರನ್ನು ಬದಲಿಸಿ ಆದಿನಾರಾಯಣ ಎಂಬುವವರಿಗೆ ಟಿಕೆಟ್ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular