ಶ್ರೀನಗರ: ಸೇನಾ ವಾಹನದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ನಾಲ್ವರು ಯೋಧರು ಹುತಾತ್ಮರಾಗಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.
ಜಮ್ಮು-ಕಾಶ್ಮೀರದ ಪೂಂಚ್ ವಲಯದಲ್ಲಿ ಈ ದುರಂತ ಸಂಭವಿಸಿದೆ. ಅರಣ್ಯ ಪ್ರದೇಶದಲ್ಲಿ ಸೇನಾ ವಾಹನ ತೆರಳುತ್ತಿದ್ದ ವೇಳೆ ವಾಹನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.
ಅಗ್ನಿ ಆಕಸ್ಮಿಕದಿಂದಾಗಿ ಸೇನಾ ವಾಹನ ಹೊತ್ತಿ ಉರಿದಿದ್ದು, ಸೇನಾ ವಾಹನದಲ್ಲಿ ತೆರಳುತ್ತಿದ್ದ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.