ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಲ್ಲಿ ಗುರುವಾರ ಭಾರತೀಯ ಸೇನೆಯ ವಾಹನಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಐವರು ಸೈನಿಕರು ಸಾವನ್ನಪ್ಪಿದ್ದಾರೆ.
ರಕ್ಷಣಾ PRO ಲೆಫ್ಟಿನೆಂಟ್ ಕರ್ನಲ್ ದೇವೇಂದರ್ ಆನಂದ್ ಪ್ರಕಾರ, ಇಂದು, ಸುಮಾರು 3 ಗಂಟೆ ಸುಮಾರಿಗೆ ಭಾರತೀಯ ಸೇನೆಯ ವಾಹನ ಭಿಂಬರ್ ಗಲಿಯಿಂದ ಜಿಲ್ಲೆಯ ಪೂಂಚ್ ನ ಸಂಗಿಯೋಟ್ ಗೆ ಚಲಿಸುವಾಗ ಬೆಂಕಿ ಹೊತ್ತಿಕೊಂಡಿದೆ. ಈ ದುರಂತ ಘಟನೆಯಲ್ಲಿ ಭಾರತೀಯ ಸೇನೆಯ ಐವರು ಸೈನಿಕರು ಹುತಾತ್ಮರಾಗಿದ್ದಾರೆ.
ಬೆಂಕಿಯ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ. ಸೇನಾ ಘಟಕಕ್ಕೆ ವಾಹನದಲ್ಲಿ ಸೀಮೆಎಣ್ಣೆ ಸಾಗಿಸುತ್ತಿದ್ದರು ಎನ್ನಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.