HomeKarnatakaಕೆಎಂಎಫ್ ನೇಮಕಾತಿ ತಡೆಯಾಜ್ಞೆ ತೆರವು: ಪಟ್ಟಿ ಪ್ರಕಟಿಸಿ ನೇಮಕಾತಿ ಆದೇಶ ನೀಡಲು ಹೈಕೋರ್ಟ್ ಅನುಮತಿ

ಕೆಎಂಎಫ್ ನೇಮಕಾತಿ ತಡೆಯಾಜ್ಞೆ ತೆರವು: ಪಟ್ಟಿ ಪ್ರಕಟಿಸಿ ನೇಮಕಾತಿ ಆದೇಶ ನೀಡಲು ಹೈಕೋರ್ಟ್ ಅನುಮತಿ

ಬೆಂಗಳೂರು: ಕೆಎಂಎಫ್ ವತಿಯಿಂದ 487 ಹುದ್ದೆಗಳ ನೇಮಕಾತಿ ಕುರಿತಾಗಿ ಅಂತಿಮ ಆಯ್ಕೆ ಪ್ರಕಟಿಸಲು ವಿಧಿಸಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ.

ನೇಮಕಾತಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದ್ದು, ಅಭ್ಯರ್ಥಿಗಳ ಅಂಕ ತಿದ್ದಲು ಪ್ರತಿ ಹುದ್ದೆಗೆ 30 ರಿಂದ 50 ಲಕ್ಷ ರೂಪಾಯಿ ಲಂಚ ಪಡೆಯಲಾಗಿದೆ ಎಂದು ಆರೋಪಿಸಿ ಚಿಕ್ಕಬಳ್ಳಾಪುರ ಜಿಲ್ಲೆ ಐತಪ್ಪನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಸೇರಿದಂತೆ ಐದು ಸಂಘಗಳು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರಿದ್ದ ನ್ಯಾಯಪೀಠ ತಡೆಯಾಜ್ಞೆ ತೆರವುಗೊಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೇಮಕಾತಿಗೆ ಸಂಬಂಧಿಸಿದ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿ ನೇಮಕಾತಿ ಆದೇಶ ನೀಡಲು ಅನುಮತಿ ನೀಡಲಾಗಿದೆ. ಆಯ್ಕೆ ಪಟ್ಟಿ ಪ್ರಕಟ ಮತ್ತು ನೇಮಕಾತಿ ಆದೇಶ ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular