HomeIndiaಜೂನ್ 5 ರಿಂದ CUET ಪಿಜಿ ಪ್ರವೇಶ ಪರೀಕ್ಷೆ, ಮೇ 5 ರವರೆಗೆ ಅರ್ಜಿ ಸಲ್ಲಿಕೆಗೆ...

ಜೂನ್ 5 ರಿಂದ CUET ಪಿಜಿ ಪ್ರವೇಶ ಪರೀಕ್ಷೆ, ಮೇ 5 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ

ನವದೆಹಲಿ: ದೇಶದ ವಿವಿಗಳಲ್ಲಿ ಸ್ನಾತಕೋತರ ಕೋರ್ಸ್ ಗಳ ಪ್ರವೇಶಕ್ಕಾಗಿ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ ಪಿಜಿ(CUET-PG) ಜೂನ್ 5 ರಿಂದ 12 ರವರೆಗೆ ನಡೆಯಲಿದೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ಗುರುವಾರ ಮಾಹಿತಿ ನೀಡಿದ್ದು, ಅಭ್ಯರ್ಥಿಗಳು ಮೇ 5 ರವರೆಗೆ ಕ್ಯೂಟ್ ಪಿಜಿ ಪರೀಕ್ಷೆಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಮೊದಲು ಏಪ್ರಿಲ್ 19 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ಮೇ 5 ರವರೆಗೆ ಅರ್ಜಿ ಸಲ್ಲಿಸಬಹುದಾಗಿತ್ತು. ಅಭ್ಯರ್ಥಿಗಳು ಎನ್.ಟಿ.ಎ. ವೆಬ್ಸೈಟ್ ಗೆ ಭೇಟಿ ನೀಡಿ ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಗಳನ್ನು ಪಡೆದುಕೊಳ್ಳಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೀಟ್ ಯುಜಿ 2023ರ ಪರೀಕ್ಷೆಗೆ 20 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ದೇಶಾದ್ಯಂತ ಈ ವರ್ಷ 1.4 ಲಕ್ಷ ಎಂಬಿಬಿಎಸ್, ಬಿಡಿಎಸ್ ಸೀಟುಗಳಿಗೆ ನಡೆಯುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ- ಪದವಿ ಪೂರ್ವ ಪರೀಕ್ಷೆಗಾಗಿ 20,87,445 ಅರ್ಜಿ ಸಲ್ಲಿಕೆಯಾಗಿವೆ. ಮೇ 7 ರಂದು ಪರೀಕ್ಷೆ ನಿಗದಿಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular