HomeKarnatakaBIG NEWS: ಬಿ ಎಸ್ ವೈ ರಟ್ಟೆ ಗಟ್ಟಿಯಿದೆ; ವಿ. ಸೋಮಣ್ಣರನ್ನು ಗೆದ್ದೇ ಗೆಲ್ಲಿಸ್ತೀವಿ; ಬಿ.ವೈ.ವಿಜಯೇಂದ್ರ...

BIG NEWS: ಬಿ ಎಸ್ ವೈ ರಟ್ಟೆ ಗಟ್ಟಿಯಿದೆ; ವಿ. ಸೋಮಣ್ಣರನ್ನು ಗೆದ್ದೇ ಗೆಲ್ಲಿಸ್ತೀವಿ; ಬಿ.ವೈ.ವಿಜಯೇಂದ್ರ ಶಪಥ

ಮೈಸೂರು: ವಿಧಾನಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿರುವ ವರುಣಾ ಅಖಾಡ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಅವರನ್ನು ಮಣಿಸಲು ಬಿಜೆಪಿ ರಣತಂತ್ರ ರೂಪಿಸಿದೆ. ವರುಣಾದಲ್ಲಿ ಸಚಿವ ವಿ. ಸೋಮಣ್ಣ ಅವರನ್ನು ಗೆದ್ದೇ ಗೆಲ್ಲಿಸುತ್ತೇವೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಶಪಥ ಮಾಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಬಿ.ವೈ. ವಿಜಯೇಂದ್ರ, ಮಾಜಿ ಸಿಎಂ ಯಡಿಯೂರಪ್ಪನವರ ರಟ್ಟೆ ಗಟ್ಟಿಯಿದೆ. ಅವರು ಸುಮ್ಮನೇ ಕೂರುವ ವ್ಯಕ್ತಿಯಲ್ಲ. ಅವರು ಒಂದು ಹೆಜ್ಜೆ ಮುಂದಿಟ್ಟರೆ ಪರಿಣಾಮ ಏನಾಗುತ್ತದೆ ಎಂಬುದು ವಿರೋಧಿಗಳಿಗೆ ಗೊತ್ತಿದೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯನವರಿಗೆ ಕೌಂಟರ್ ನೀಡಿದ್ದಾರೆ.

ಯಡಿಯೂರಪ್ಪನವರು 81ನೇ ವಯಸ್ಸಿನಲ್ಲಿಯೂ ಕೆಲಸ ಮಾಡುತ್ತಿದ್ದಾರೆ. ವರುಣಾದಲ್ಲಿ ಸೋಮಣ್ಣ ಅವರನ್ನು ಗೆಲ್ಲಿಸುತ್ತೇವೆ. ವರುಣಾದಲ್ಲಿ ದೇವರು ಮೆಚ್ಚುವ ರೀತಿಯಲ್ಲಿ ಕೆಲಸ ಮಾಡುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೋಲು ಖಚಿತ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular