ಬೆಂಗಳೂರು: ಕಾಂಗ್ರೆಸ್ ಪಕ್ಷ ಹಣ ಪಡೆದು ಅಭ್ಯರ್ಥಿಗಳಿಗೆ ಬಿ ಫಾರ್ಮ್ ನೀಡಿದ್ದು, ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬಿ ಫಾರ್ಮ್ ನೀಡಲು ಒಬ್ಬ ಅಭ್ಯರ್ಥಿಯಿಂದ 2 ಲಕ್ಷ ಹಣ ಪಡೆದು ಬಿ ಫಾರ್ಮ್ ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಿಂದ ಲಂಚ ಪಡೆದುಕೊಳ್ಳುತ್ತಿದೆ. ಈವರೆಗೆ 1350 ಅರ್ಜಿಗಳು ಬಂದಿದ್ದು ಡಿ.ಕೆ. ಶಿವಕುಮಾರ್ ಹೇಳಿದಂತೆ 23 ಕೋಟಿ ಹಣ ಸಂಗ್ರಹ ಮಾಡಿದ್ದಾರೆ. ಇದು ಜನಪ್ರತಿನಿಧಿ ಕಾಯ್ದೆ ಪ್ರಕಾರ ಅಪರಾಧ ಎಂದು ವಾಗ್ದಾಳಿ ನಡೆಸಿದರು.
ಈ ಹಿನ್ನೆಲೆಯಲ್ಲಿ 223 ಅರ್ಜಿಗಳನ್ನು ಅನೂರ್ಜಿತಗೊಳಿಸಿ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾಗಿ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.