ಚಾಮರಾಜನಗರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಜೆ ಎಸ್ ಎಸ್ ಪಿಯು ಕಾಲೇಜು ವಿದ್ಯಾರ್ಥಿನಿ ವಿಜಯಲಕ್ಷ್ಮಿ (18) ಮೃತ ಯುವತಿ. ವಿಜಯಲಕ್ಷ್ಮಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದಳು. ಫಲಿತಾಂಶ ಬರುತ್ತಿದ್ದಂತೆ ಅನುತ್ತೀರ್ಣಳಾಗಿರುವ ವಿಷಯ ಕೇಳಿ ಹಾಸ್ಟೆಲ್ ನಲ್ಲಿಯೇ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವಿಜಯಲಕ್ಷ್ಮಿ ಗುಂಡ್ಲುಪೇಟೆ ತಾಲೂಕಿನ ಮಡಗೂರು ಗ್ರಾಮದ ನಿವಾಸಿ. ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-ಕೆಸಿಇಟಿಗಾಗಿ ತಯಾರಿ ನಡೆಸಲೆಂದು ಹಾಸ್ಟೆಲ್ ನಲ್ಲಿ ವಾಸವಾಗಿದ್ದಳು. ಪೊಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.