alex Certify ಎಲೆಕ್ಷನ್ ಹೊತ್ತಲ್ಲೇ ಜೆಡಿಎಸ್ ಅಭ್ಯರ್ಥಿಗೆ ಐಟಿ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಲೆಕ್ಷನ್ ಹೊತ್ತಲ್ಲೇ ಜೆಡಿಎಸ್ ಅಭ್ಯರ್ಥಿಗೆ ಐಟಿ ಶಾಕ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ರವೀಂದ್ರಪ್ಪ ನಿವಾಸದ ಮೇಲೆ ಶುಕ್ರವಾರ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಹಿರಿಯೂರು ತಾಲೂಕಿನ ಮುಂಗುಸವಳ್ಳಿ ಗ್ರಾಮದ ತೋಟದಲ್ಲಿರುವ ನಿವೃತ್ತ ಇಂಜಿನಿಯರ್ ರವೀಂದ್ರಪ್ಪ ಅವರ ನಿವಾಸದ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತೋಟದ ಮನೆಯಿಂದಲೇ ಚುನಾವಣಾ ಕಾರ್ಯ ನಿರ್ವಹಿಸಲಾಗುತ್ತಿತ್ತು. ಶುಕ್ರವಾರ ಮಧ್ಯಾಹ್ನದ ವೇಳೆಗೆ ದಾಳಿ ಮಾಡಿದ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ರವೀಂದ್ರಪ್ಪ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...