HomeKarnatakaBIG NEWS: BSY ಪ್ರಭಾವ ಕುಗ್ಗಿಲ್ಲ; ಕಾರ್ಯಕರ್ತರೇ ಬಿಜೆಪಿಯ ಆಸ್ತಿ ಎಂದ ಬಿ.ವೈ. ವಿಜಯೇಂದ್ರ

BIG NEWS: BSY ಪ್ರಭಾವ ಕುಗ್ಗಿಲ್ಲ; ಕಾರ್ಯಕರ್ತರೇ ಬಿಜೆಪಿಯ ಆಸ್ತಿ ಎಂದ ಬಿ.ವೈ. ವಿಜಯೇಂದ್ರ

ಮೈಸೂರು: ಬಿಜೆಪಿಯಲ್ಲಿ ಹೊಸ ಮುಖಗಳಿಗೆ ಅವಕಾಶ ಕೊಡಲಾಗಿದೆ. ಕಾರ್ಯಕರ್ತರ ಅಭಿಪ್ರಾಯ, ಸರ್ವೆ ನಡೆಸಿ ಮಾಹಿತಿ ಸಂಗ್ರಹಿಸಲಾಗಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ವಿಜಯೇಂದ್ರ, ಪಕ್ಷದಿಂದ ಆಂತರಿಕ ಸರ್ವೆ ನಡೆಸಿ ಟಿಕೆಟ್ ಫೈನಲ್ ಮಾಡಲಾಗಿದೆ. ಈ ಹಿಂದೆ ಗುಜರಾತ್ ನಲ್ಲಿ ಮೊದಲ ಪ್ರಯೋಗ ಮಾಡಲಾಗಿತ್ತು. ಈ ಬಾರಿ ರಾಜ್ಯದಲ್ಲಿ ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರುತ್ತೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿಯಲ್ಲಿ ಬಿ ಎಸ್ ವೈ ಅವರ ಪ್ರಭಾವ ಕುಗ್ಗಿಲ್ಲ. ಬಿಜೆಪಿ ಯಾರೋ ಒಬ್ಬರಿಗೆ ಸೀಮಿತವಾಗಿರುವ ಪಕ್ಷವಲ್ಲ. ಲಕ್ಷಾಂತರ ಕಾರ್ಯಕರ್ತರೇ ಪಕ್ಷದ ಆಸ್ತಿ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular