HomeKarnatakaBIG NEWS: ಸಮಾಜವನ್ನು ಒಡೆದು ಬೆಂಕಿ ಹಾಕುವ ಕೆಲಸ ಮಾಡುತ್ತಿರುವುದು ಕಾಂಗ್ರೆಸ್; ಶೆಟ್ಟರ್ ಕಾಂಗ್ರೆಸ್ ಸೇರಿದ್ದು...

BIG NEWS: ಸಮಾಜವನ್ನು ಒಡೆದು ಬೆಂಕಿ ಹಾಕುವ ಕೆಲಸ ಮಾಡುತ್ತಿರುವುದು ಕಾಂಗ್ರೆಸ್; ಶೆಟ್ಟರ್ ಕಾಂಗ್ರೆಸ್ ಸೇರಿದ್ದು ದುರಂತ; ಬಿ.ವೈ.ವಿಜಯೇಂದ್ರ ವಾಗ್ದಾಳಿ

ಮೈಸೂರು: ದೇಶದಲ್ಲಿ ಕಾಂಗ್ರೆಸ್ ಪಕ್ಷ ದಿವಾಳಿಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಹೈಕಮಾಂಡ್ ಗೆ ಎಟಿಎಂ ಆಗಲು ಪಿತೂರಿ ನಡೆಸಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ,ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸ್ ಸಮಾಜವನ್ನು ಒಡೆದು ಬೆಂಕಿ ಹಾಕುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ನಾಯಕರಿಗೆ ವೀರಶೈವ ಲಿಂಗಾಯಿತ ಸೇರಿದಂತೆ ಯಾವುದೇ ಸಮಾಜದ ಬಗ್ಗೆ ಕಾಳಜಿಯಿಲ್ಲ. ಲಿಂಗಾಯಿತ ಸಮಾಜದ ಬಗ್ಗೆ ಮಾತನಾಡುವ ನೈತಿಕತೆಯೂ ಇಲ್ಲ ಎಂದು ಹೇಳುವ ಮೂಲಕ ಡಿ.ಕೆ. ಶಿವಕುಮಾರ್ ಅವರಿಗೆ ತಿರುಗೇಟು ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಜಗದೀಶ್ ಶೆಟ್ಟರ್ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿರುವ ವಿಚಾರವಾಗಿಯೂ ಕಿಡಿ ಕಾರಿದ ವಿಜಯೇಂದ್ರ, ವಿರೇಂದ್ರ ಪಾಟೀಲ್ ಅವರನ್ನು ಕಾಂಗ್ರೆಸ್ ಸರಿಯಾಗಿ ನಡೆಸಿಕೊಂಡಿಲ್ಲ. ಜಗದೀಶ್ ಶೆಟ್ಟರ್ ಹಿರಿಯರು ಕೀಳಾಗಿ ನಾನು ಮಾತನಾಡಲ್ಲ. ಆದರೆ ಅವರು ಪಕ್ಷ ಬಿಟ್ಟು ಹೋಗಿದ್ದು ನೋವಾಗಿದೆ. ವೀರಶೈವ ಲಿಂಗಾಯಿತ ಎಂದು ಒಡೆಯಲು ಹೋದ ಕಾಂಗ್ರೆಸ್ ಪಕ್ಷ ಸೇರಿದ್ದು ನೋವು ತಂದಿದೆ. ಕಾಂಗ್ರೆಸ್ ಸೇರುವ ಬದಲು ಪಕ್ಷೇತರರರಾಗಿ ನಿಲ್ಲಬಹುದಿತ್ತು. ಬೇರೆ ಬೇರೆ ಜಾತಿ ಒಡೆಯಲು ಯತ್ನಿಸಿದ್ದು ಕಾಂಗ್ರೆಸ್. ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿದ್ದು ದುರಂತ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular