BIG NEWS: ಬಿಜೆಪಿಯ ಮತ್ತೊಂದು ವಿಕೆಟ್ ಪತನ; ಸಚಿವ ಆನಂದ್ ಸಿಂಗ್ ಸಹೋದರಿ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಅಖಾಡ ಕ್ಷಣ ಕ್ಷಣಕ್ಕೂ ಕದನ ಕೌತುಕಕ್ಕೆ ಸಾಕ್ಷಿಯಾಗಿದ್ದು, ಸಚಿವ ಆನಂದ್ ಸಿಂಗ್ ಸಹೋದರಿ ರಾಣಿ ಸಂಯುಕ್ತಾ ಸಿಂಗ್ ಬಿಜೆಪಿಗೆ ರಾಜೀನಾಮೆ ನೀಡಿ, ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ರಾಣಿ ಸಂಯುಕ್ತಾ ರಾಜ್ಯ ಬಿಜೆಪಿ ಮಹಿಳಾ ಘಟಕದ ಉಪಾಧ್ಯಕ್ಷೆ ಕೂಡ ಆಗಿದ್ದರು. ಹೊಸಕೋಟೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಬಿಜೆಪಿ ಟಿಕೆಟ್ ವಂಚನೆಯಾಗಿದ್ದ ಹಿನ್ನೆಲೆಯಲ್ಲಿ ಪಕ್ಷದ ವಿರುದ್ಧ ಅಸಮಾಧನಗೊಂಡು ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.

ಕಾಂಗ್ರೆಸ್ ಸೇರ್ಪಡೆ ನಿಟ್ಟಿನಲ್ಲಿ ನಿನ್ನೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇಂದು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ರಾಣಿ ಸಂಯುಕ್ತಾ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read