ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಜ್ಯದ ವಿವಿಧಡೆ ಪ್ರಚಾರ ಕೈಗೊಂಡಿದ್ದಾರೆ. ಪ್ರಚಾರಕ್ಕಾಗಿ ಅವರು ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದು, ಚುನಾವಣಾ ಆಯೋಗದ ಅಧಿಕಾರಿಗಳು ಅವರ ಹೆಲಿಕಾಪ್ಟರ್ ಪರಿಶೀಲನೆ ನಡೆಸಿದ್ದಾರೆ. ನಿನ್ನೆ ಮತ್ತು ಇಂದು ಅವರ ಹೆಲಿಕಾಪ್ಟರ್ ಪರಿಶೀಲನೆ ನಡೆಸಲಾಗಿದೆ. ಇದರಿಂದ ವಿಳಂಬವಾಗಿದೆ ಎಂದು ಡಿಕೆಶಿ ಹೇಳಿಕೊಂಡಿದ್ದಾರೆ.
ಚುನಾವಣಾ ಆಯೋಗದ ಅಧಿಕಾರಿಗಳು ನಿನ್ನೆ ಮತ್ತು ಇಂದು ಎರಡು ದಿನ ನನ್ನ ಹೆಲಿಕಾಪ್ಟರ್ ಅನ್ನೇ ಪರಿಶೀಲನೆ ನಡೆಸಿದ್ದಾರೆ. ಅವರು ಪ್ರತಿದಿನ ಪರಿಶೀಲಿಸಲು ನನ್ನ ಅಭ್ಯಂತರವೇನಿಲ್ಲ. ಆದರೆ, ಕಾಲಮಿತಿಯೊಳಗೆ ಪರಿಶೀಲನೆ ಮುಗಿಸಿ ಚುನಾವಣೆ ಪ್ರಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಡಿಕೆಶಿ ಹೇಳಿದ್ದಾರೆ.