HomeKarnatakaಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಲಿಂಗಾಯತ ಮುಖ್ಯಮಂತ್ರಿಗಳ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸಿದ್ದರಾಮಯ್ಯನವರ ವಿರುದ್ಧ ದೂರು ನೀಡಲಾಗಿದೆ.

ಲಿಂಗಾಯತ ಯುವ ವೇದಿಕೆಯ ಕಾನೂನು ಘಟಕದಿಂದ ಸಿದ್ದರಾಮಯ್ಯ ಅವರ ವಿರುದ್ಧ ದೂರು ನೀಡಲಾಗಿದೆ. ಸಿದ್ದರಾಮಯ್ಯನವರು ಇಡೀ ಲಿಂಗಾಯಿತ ಸಮುದಾಯವನ್ನು ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಅವರ ವಿರುದ್ಧ ಕ್ರಮಕ್ಕೆ ಮನವಿ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆ ನಂತರ ಮಾತನಾಡಿದ ಲಿಂಗಾಯತ ಯುವ ವೇದಿಕೆ ಮುಖಂಡ ಬಸವರಾಜ್, ಲಿಂಗಾಯಿತ ಮುಖ್ಯಮಂತ್ರಿಗಳು ಭ್ರಷ್ಟರು ಎಂದು ಹೇಳಿಕೆ ನೀಡಿದ್ದು ಸರಿಯಲ್ಲ. ನಾವು ಯಾವುದೇ ಪಕ್ಷದ ಪರವಾಗಿ ಆಯೋಗಕ್ಕೆ ದೂರು ನೀಡಿಲ್ಲ. ಇಡೀ ಲಿಂಗಾಯತ ಸಮುದಾಯವನ್ನು ತೇಜೋವಧೆ ಮಾಡಿದ್ದಾರೆ. ಕೂಡಲೇ ಸಿದ್ದರಾಮಯ್ಯನವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದೇವೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular