ಬೆಂಗಳೂರಿನಲ್ಲಿ ಸರ್ಕಾರಿ ಆಸ್ಪತ್ರೆಯ ವೈದ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳ ತಜ್ಞರಾಗಿದ್ದ ಡಾ.ಎಸ್. ರೇಣುಕಾನಂದ(43) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಅವರು ಮಕ್ಕಳ ತಜ್ಞರಾಗಿದ್ದರು. ಅನಾರೋಗ್ಯದಿಂದ ಬೇಸತ್ತು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಸೀರೆಯಲ್ಲಿ ರೇಣುಕಾನಂದ ನೇಣು ಹಾಕಿಕೊಂಡಿದ್ದಾರೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಡ್ಯೂಟಿ ರೂಮ್ ನಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಿಲಕ್ ನಗರ ಪೊಲೀಸ್ ಠಾಣೆಗೆ ಆಸ್ಪತ್ರೆ ಸಿಬ್ಬಂದಿ ಮಾಹಿತಿ ನೀಡಿದ್ದು, ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಶವ ಸ್ಥಳಾಂತರ ಮಾಡಲಾಗಿದೆ. ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.