HomeKarnatakaರಾಹುಲ್ ಗಾಂಧಿ ಬಿಜೆಪಿ ಸ್ಟಾರ್ ಪ್ರಚಾರಕ: ಯತ್ನಾಳ್

ರಾಹುಲ್ ಗಾಂಧಿ ಬಿಜೆಪಿ ಸ್ಟಾರ್ ಪ್ರಚಾರಕ: ಯತ್ನಾಳ್

ವಿಜಯಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಜಯಪುರ ನಗರಕ್ಕೆ ಪ್ರಚಾರಕ್ಕೆ ಬಂದರೆ ಬಿಜೆಪಿಗೆ ಅನುಕೂಲವಾಗುತ್ತದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾಂಗ್ರೆಸ್ ಪರ ಪ್ರಚಾರ ಮಾಡಿದರೆ ನಾನು 50,000ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಯತ್ನಾಳ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಹುಲ್ ಗಾಂಧಿ ಪ್ರಚಾರಕ್ಕೆ ಹೋದ ಕಡೆಯಲ್ಲೆಲ್ಲ ಕಾಂಗ್ರೆಸ್ ಅವಸಾನವಾಗುತ್ತದೆ ಎಂದು ವ್ಯಂಗ್ಯವಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿಯ ಸ್ಟಾರ್ ಪ್ರಚಾರಕರು. ಅವರು ಪ್ರಚಾರ ಮಾಡಿದಷ್ಟು ಬಿಜೆಪಿಗೆ ದೊಡ್ಡ ಲಾಭವಾಗುತ್ತದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular