HomeKarnatakaಅಮೆರಿಕ, ರಷ್ಯಾ ಅಧ್ಯಕ್ಷರನ್ನೂ ಪ್ರಚಾರಕ್ಕೆ ಕರೆಸಲಿ: ಅಮಿತ್ ಶಾ ಹಾಸನ ಭೇಟಿಗೆ ಹೆಚ್.ಡಿ. ರೇವಣ್ಣ ಟಾಂಗ್

ಅಮೆರಿಕ, ರಷ್ಯಾ ಅಧ್ಯಕ್ಷರನ್ನೂ ಪ್ರಚಾರಕ್ಕೆ ಕರೆಸಲಿ: ಅಮಿತ್ ಶಾ ಹಾಸನ ಭೇಟಿಗೆ ಹೆಚ್.ಡಿ. ರೇವಣ್ಣ ಟಾಂಗ್

ಹಾಸನ: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಪ್ರಚಾರ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಸನ ಜಿಲ್ಲೆಗೆ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಟಾಂಗ್ ಕೊಟ್ಟಿದ್ದಾರೆ.

ಬೇಲೂರಿನಲ್ಲಿ ಮಾತನಾಡಿದ ರೇವಣ್ಣ, ಅಮೆರಿಕ, ರಷ್ಯಾ ಅಧ್ಯಕ್ಷರನ್ನೂ ಪ್ರಚಾರಕ್ಕೆ ಕರೆದುಕೊಂಡು ಬರಲಿ, ನಮಗೆ ದೇವೇಗೌಡರು, ಕುಮಾರಣ್ಣ ಸಾಕು, ಮತ್ಯಾರು ಬೇಡ. ದೇವೇಗೌಡರು, ಕುಮಾರಸ್ವಾಮಿ ಮತ್ತು ಜನರೇ ನಮಗೆ ಚಾಣಕ್ಯರು. ಜನರ ಆಶೀರ್ವಾದದಿಂದ ನಮಗೇನು ತೊಂದರೆ ಇಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎರಡು ರಾಷ್ಟ್ರೀಯ ಪಕ್ಷಗಳ ಆಡಳಿತವನ್ನು ಜನರು ನೋಡಿದ್ದಾರೆ. ರಾಷ್ಟ್ರೀಯ ಪಕ್ಷಗಳನ್ನು ಸ್ವಲ್ಪ ದಿನ ರೆಸ್ಟ್ ಗೆ ಕಳುಹಿಸಲು ತೀರ್ಮಾನಿಸಿದ್ದಾರೆ. ನಮಗೆ ಜನ ಉಳಿಯಬೇಕು, ರಾಜ್ಯ ಉಳಿಯಬೇಕು ಎಂದು ರೇವಣ್ಣ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular