ಈಗಾಗಲೇ ಅಧಿಕಾರದಲ್ಲಿರುವ ಲಿಂಗಾಯತ ಮುಖ್ಯಮಂತ್ರಿ ಭ್ರಷ್ಟಾಚಾರ ಮಾಡುತ್ತಿದ್ದಾರೆ ಎಂಬ ತಮ್ಮ ಹೇಳಿಕೆಯನ್ನು ತಿರುಚಲಾಗಿದೆ. ಬಸವರಾಜ ಬೊಮ್ಮಾಯಿ ಅವರಿಗೆ ಸೀಮಿತಗೊಳಿಸಿ ನಾನು ಹೇಳಿದ್ದನ್ನು ಬಿಜೆಪಿಯವರು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದರು
ಇದಕ್ಕೆ ದಾವಣಗೆರೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯನವರ ಹೇಳಿಕೆಯನ್ನು ತಿರುಚಲಾಗಿಲ್ಲ. ಅವರೇ ತಮ್ಮ ಹೇಳಿಕೆಯನ್ನು ಬದಲಾಯಿಸುತ್ತಿದ್ದಾರೆ. ಈಗಿನ ಕಾಲದಲ್ಲಿ ಹೇಳಿಕೆಗಳನ್ನು ತಿರುಚಲು ಸಾಧ್ಯವಾಗುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯ ಏನು ಮಾತನಾಡಿದ್ದಾರೆ ಎಂಬುದು ವಿಡಿಯೋದಲ್ಲಿ ಸ್ಪಷ್ಟವಾಗಿ ಇದೆ. ಜನ ಏನು ದಡ್ಡರಿಲ್ಲ ಎಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ನವರಿಗೆ ಈ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಗುಡುಗಿದ್ದಾರೆ.