HomeKarnatakaBIG NEWS: ಕೂಸು ಹುಟ್ಟುವ ಮುನ್ನವೇ ಕುಲಾವಿ ಹೊಲಿಸಲು ಆಗುತ್ತಾ....? ಬಿಜೆಪಿಗೆ ಟಾಂಗ್ ನೀಡಿದ ಸಿದ್ದರಾಮಯ್ಯ

BIG NEWS: ಕೂಸು ಹುಟ್ಟುವ ಮುನ್ನವೇ ಕುಲಾವಿ ಹೊಲಿಸಲು ಆಗುತ್ತಾ….? ಬಿಜೆಪಿಗೆ ಟಾಂಗ್ ನೀಡಿದ ಸಿದ್ದರಾಮಯ್ಯ

ಬೆಳಗಾವಿ: ನಾನು ಲಿಂಗಾಯಿತರು ಭ್ರಷ್ಟರು ಎಂದು ಹೇಳಿಲ್ಲ, ನನ್ನ ಹೇಳಿಕೆಯನ್ನು ತಿರುಚಿದ್ದಾರೆ. ನಾನು ಹೇಳಿದ್ದು ಸಿಎಂ ಬೊಮ್ಮಾಯಿ ಅವರು ಬಹಳ ಭ್ರಷ್ಟರು ಎಂದು ಹೇಳಿದ್ದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನಾನು ಸಿಎಂ ಬೊಮ್ಮಾಯಿ ಅವರಿಗೆ ಸೀಮತವಾಗಿ ಮಾತ್ರ ಹೇಳಿದ್ದು ಹೊರತು ಲಿಂಗಾಯಿತ ಸಮುದಾಯದ ಬಗ್ಗೆ ಮಾತನಾಡಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನೇ ತಿರುಚಿದ್ದಾರೆ. ಬಸವರಾಜ್ ಬೊಮ್ಮಾಯಿ ಬಹಳ ಭ್ರಷ್ಟ ಸಿಎಂ ಎಂದಿದ್ದೇನೆ. ಸಮುದಾಯದ ಬಗ್ಗೆ ನಾನು ಮಾತನಡಿಲ್ಲ. ಲಿಂಗಾಯಿತರ ಬಗ್ಗೆ ನನಗೆ ಗೌರವ ಇದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ನವರು ಲಿಂಗಾಯಿತರನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಲಿ ಎಂಬ ಸವಾಲಿಗೂ ಉತ್ತರಿಸುತ್ತಾ, ಕೂಸು ಹುಟ್ಟುವ ಮುನ್ನವೇ ಕುಲಾವಿ ಹೊಲಿಸಲು ಹೇಗೆ ಆಗುತ್ತೆ? ಮೊದಲು ಪಕ್ಷ ಅಧಿಕಾರಕ್ಕೆ ಬರಲಿ. ಬಳಿಕ ವರಿಷ್ಠರು ಸಿಎಂ ಯಾರಾಗಬೇಕು ಎಂಬುದನ್ನು ತೀರ್ಮಾನ ಮಾಡ್ತಾರೆ. ಈ ಬಾರಿ ಬಿಜೆಪಿ ಹೀನಾಯವಾಗಿ ಸೋಲಲಿದೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular