alex Certify ಸುಡಾನ್ ನಿಂದ ಭಾರತೀಯರನ್ನು ಕರೆತಲು ‘ಆಪರೇಷನ್ ಕಾವೇರಿ’ ಕಾರ್ಯಾಚರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸುಡಾನ್ ನಿಂದ ಭಾರತೀಯರನ್ನು ಕರೆತಲು ‘ಆಪರೇಷನ್ ಕಾವೇರಿ’ ಕಾರ್ಯಾಚರಣೆ

ಯುದ್ಧ ಪೀಡಿತ ಸುಡಾನ್‌ನಿಂದ ತನ್ನ ನಾಗರಿಕರನ್ನು ಸ್ಥಳಾಂತರಿಸುವ ಭಾರತದ ಕಾರ್ಯಾಚರಣೆ ನಡೆಯುತ್ತಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್ ಮಾಡಿದ್ದಾರೆ. ಸುಮಾರು 500 ಭಾರತೀಯರು ಪೋರ್ಟ್ ಸುಡಾನ್ ಬಂದರು ತಲುಪಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ‘ಆಪರೇಷನ್ ಕಾವೇರಿ’ ಎಂದು ಹೆಸರಿಡಲಾಗಿದೆ.

“ಸುಡಾನ್‌ನಲ್ಲಿ ಸಿಲುಕಿರುವ ನಮ್ಮ ನಾಗರಿಕರನ್ನು ಮರಳಿ ಕರೆತರಲು ‘ಆಪರೇಷನ್ ಕಾವೇರಿ’ ನಡೆಯುತ್ತಿದೆ. ಸುಮಾರು 500 ಭಾರತೀಯರು ಪೋರ್ಟ್ ಸುಡಾನ್ ತಲುಪಿದ್ದಾರೆ. ಮತ್ತಷ್ಟು ಮಂದಿ ಇದೇ ದಾರಿಯಲ್ಲಿದ್ದಾರೆ. ನಮ್ಮ ಹಡಗುಗಳು ಮತ್ತು ವಿಮಾನಗಳು ಅವರನ್ನು ಮನೆಗೆ ಕರೆತರಲು ಸಜ್ಜಾಗಿವೆ. ಸುಡಾನ್‌ನಲ್ಲಿರುವ ನಮ್ಮ ಎಲ್ಲ ಸಹೋದರರಿಗೆ ಸಹಾಯ ಮಾಡಲು ಬದ್ಧವಾಗಿದೆ” ಎಂದು ಜೈಶಂಕರ್ ಟ್ವೀಟ್ ಮಾಡಿದ್ದಾರೆ.

— Dr. S. Jaishankar (Modi Ka Parivar) (@DrSJaishankar) April 24, 2023

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...