alex Certify ವಿಮಾನದಲ್ಲೇ ಅನುಚಿತ ವರ್ತನೆ: ಫುಲ್ ಟೈಟಾಗಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜಿಸಿದ ಭೂಪ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಮಾನದಲ್ಲೇ ಅನುಚಿತ ವರ್ತನೆ: ಫುಲ್ ಟೈಟಾಗಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜಿಸಿದ ಭೂಪ ಅರೆಸ್ಟ್

ವಿಮಾನದಲ್ಲಿ ಕುಡಿದ ಮತ್ತಿನಲ್ಲಿ ದುರ್ವರ್ತನೆ ತೋರಿದ ಮತ್ತೊಂದು ಘಟನೆ ನಡೆದಿದೆ. ಅಮೆರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ತನ್ನ ಸಹ-ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಭಾರತೀಯ ವ್ಯಕ್ತಿಯೊಬ್ಬನನ್ನು ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಪ್ರಯಾಣಿಕ ಮದ್ಯದ ಅಮಲಿನಲ್ಲಿದ್ದ. ಜಗಳದ ಸಮಯದಲ್ಲಿ ತನ್ನ ಸಹ-ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜಿಸಿದ್ದಾನೆ. ನ್ಯೂಯಾರ್ಕ್ ನಿಂದ ದೆಹಲಿಗೆ ತೆರಳುತ್ತಿದ್ದ ಅಮೆರಿಕನ್ ಏರ್ ಲೈನ್ಸ್ ಎಎ 292 ವಿಮಾನದಲ್ಲಿ ಈ ಘಟನೆ ನಡೆದಿದೆ. ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆದ ನಂತರ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್) ಆಪಾದಿತ ಅಶಿಸ್ತಿನ ಪ್ರಯಾಣಿಕನನ್ನು ಬಂಧಿಸಿದೆ.

ವಿಮಾನ ಇಳಿಯುವ ಮೊದಲು ದೆಹಲಿ ವಿಮಾನ ನಿಲ್ದಾಣಕ್ಕೆ ಮಾಹಿತಿ ನೀಡಲಾಗಿತ್ತು. ಇಬ್ಬರು ಪ್ರಯಾಣಿಕರನ್ನು ನಂತರ ದೆಹಲಿ ಪೊಲೀಸರಿಗೆ ಹಸ್ತಾಂತರಿಸಲಾಯಿತು. ಸಂತ್ರಸ್ತ ಪ್ರಯಾಣಿಕರು ಔಪಚಾರಿಕ ದೂರು ದಾಖಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...