ಬೆಂಗಳೂರು: ಬಿಡುವಿಲ್ಲದೆ ನಿರಂತರ ಪ್ರಚಾರ ಕೈಗೊಂಡ ಪರಿಣಾಮ ಜ್ವರ ಹಾಗೂ ಬಳಲಿಕೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಚೇತರಿಸಿಕೊಂಡಿದ್ದು, ಸೋಮವಾರ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮಂಗಳವಾರದಿಂದ ಹೈವೋಲ್ಟೇಜ್ ವರುಣ ಕ್ಷೇತ್ರ ಸೇರಿದಂತೆ ಮೈಸೂರು ಭಾಗದಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಶನಿವಾರ ರಾತ್ರಿಯಿಂದ ಸೋಮವಾರ ರಾತ್ರಿವರೆಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದ ಅವರು ಮನೆಗೆ ಮರಳಿದ್ದಾರೆ. ಚುನಾವಣೆಗೆ ಕೆಲವು ದಿನಗಳಷ್ಟೇ ಬಾಕಿ ಇರುವುದರಿಂದ ಮತ್ತೆ ಪ್ರಚಾರ ಕೈಗೊಂಡಿದ್ದಾರೆ. ಇಂದಿನಿಂದ ವಿವಿಧ ಕ್ಷೇತ್ರಗಳಲ್ಲಿ ಹೆಚ್.ಡಿ.ಕೆ. ಪ್ರಚಾರ ಕೈಗೊಂಡಿದ್ದು, ಜೆಡಿಎಸ್ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ.