HomeKarnatakaBIG NEWS: ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಡಿ.ಬಿ. ಇನಾಂದಾರ್ ಇನ್ನಿಲ್ಲ

BIG NEWS: ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಡಿ.ಬಿ. ಇನಾಂದಾರ್ ಇನ್ನಿಲ್ಲ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಆಘಾತವಾಗಿದೆ. ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಡಿ.ಬಿ. ಇನಾಂದಾರ್ ವಿಧಿವಶರಾಗಿದ್ದಾರೆ.

ಅವರಿಗೆ 74 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಇನಾಂದಾರ್ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಂಗ್ಸ್ ಹಾಗೂ ಲಿವರ್ ಸಮಸ್ಯೆಯಿಂದ ಇನಾಂದಾರ್ ಬಳಲುತ್ತಿದ್ದರು. ಬೆಳಗಾವಿ ಜಿಲ್ಲೆ ಕಿತ್ತೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದರು. ಸಿರಸಂಗಿ ದೇಸಾಯಿ ಫೌಂಡೇಷನ್ ಟ್ರಸ್ಟ್ ನ ಖಾಯಂ ಸದಸ್ಯರಾಗಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular