HomeKarnatakaBIG NEWS: ಶೆಟ್ಟರ್ ಅವರನ್ನು ಕ್ಷಮಿಸಬೇಡಿ, ಸೋಲಿಸಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದ ಅಮಿತ್ ಶಾ

BIG NEWS: ಶೆಟ್ಟರ್ ಅವರನ್ನು ಕ್ಷಮಿಸಬೇಡಿ, ಸೋಲಿಸಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದ ಅಮಿತ್ ಶಾ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಅಖಾಡ ರಂಗೇರಿದ್ದು, ಚುನಾವಣ ಚಾಣಾಕ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಜಗದೀಶ್ ಶೆಟ್ಟರ್ ಅವರನ್ನು ಯಾವ ಕಾರಣಕ್ಕೂ ಕ್ಷಮಿಸಬೇಡಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಕಿಡಿಕಾರಿರುವ ಅಮಿತ್ ಶಾ, ಯಾವ ಕಾರಣಕ್ಕೂ ಜಗದೀಶ್ ಶೆಟ್ಟರ್ ಅವರನ್ನು ಕ್ಷಮಿಸಬಾರದು. ಅವರನ್ನು ಚುನಾವಣೆಯಲ್ಲಿ ಸೋಲಿಸಬೇಕು ಎಂದು ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಡೀ ಬಿಜೆಪಿ ಒಗ್ಗಟ್ಟಾಗಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸಬೇಕು. ಶೆಟ್ಟರ್ ಸ್ವಯಂಕೃತ ಅಪರಾಧ ಮಾಡಿದ್ದಾರೆ ಎಂದು ಗುಡುಗಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular