alex Certify ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿದೆ ವಾಯುಮಾಲಿನ್ಯ; ವರ್ಷಕ್ಕೆ 2.38 ಲಕ್ಷ ಜನರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿದೆ ವಾಯುಮಾಲಿನ್ಯ; ವರ್ಷಕ್ಕೆ 2.38 ಲಕ್ಷ ಜನರ ಸಾವು

ವಾಯುಮಾಲಿನ್ಯವು ಯುರೋಪಿನಾದ್ಯಂತ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ವರ್ಷಕ್ಕೆ 1,200 ಕ್ಕೂ ಹೆಚ್ಚು ಅಕಾಲಿಕ ಮರಣವನ್ನು ಉಂಟುಮಾಡುತ್ತಿರುವ ಆಘಾತಕಾರಿ ಸುದ್ದಿ ಹೊರಬಂದಿದೆ. ಹಲವಾರು ಮಂದಿ ದೀರ್ಘಕಾಲದ ಕಾಯಿಲೆಯ ಅಪಾಯವನ್ನು ಎದುರಿಸುತ್ತಿದ್ದಾರೆ.

ಅನೇಕ ಯುರೋಪಿಯನ್ ದೇಶಗಳಲ್ಲಿ ಇದೇ ರೀತಿ ಸಮಸ್ಯೆ ಆಗುತ್ತಿದೆ. ವಾಯು ಮಾಲಿನ್ಯಕಾರಕಗಳ ಮಟ್ಟವು ವಿಶ್ವ ಆರೋಗ್ಯ ಸಂಸ್ಥೆ ಮಾರ್ಗಸೂಚಿಗಳ ಹೊರತಾಗಿಯೂ ಹೆಚ್ಚುತ್ತಿದೆ. ವಿಶೇಷವಾಗಿ ಮಧ್ಯ-ಪೂರ್ವ ಯುರೋಪ್ ಮತ್ತು ಇಟಲಿ ಸೇರಿದಂತೆ 30 ದೇಶಗಳಲ್ಲಿ ವಾಯು ಮಾಲಿನ್ಯ ಅಧಿಕವಾಗಿದೆ ಎಂದು ವರದಿ ಹೇಳಿದೆ.

ವರದಿಯ ಪ್ರಕಾರ, ರಷ್ಯಾ, ಉಕ್ರೇನ್ ಮತ್ತು ಯುನೈಟೆಡ್ ಕಿಂಗ್‌ಡಮ್‌ನ ಪ್ರಮುಖ ಕೈಗಾರಿಕಾ ರಾಷ್ಟ್ರಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಒಟ್ಟಾರೆ ಸಾವಿನ ಸಂಖ್ಯೆ ಹೆಚ್ಚಾಗಿದೆ. 2020 ರಲ್ಲಿ ಐಸ್ಲ್ಯಾಂಡ್, ಲಿಚ್ಟೆನ್‌ಸ್ಟೈನ್, ನಾರ್ವೆ, ಸ್ವಿಟ್ಜರ್ಲೆಂಡ್ ಮತ್ತು ಟರ್ಕಿಯಲ್ಲಿ ವಾಯು ಮಾಲಿನ್ಯದಿಂದಾಗಿ 2.38 ಲಕ್ಷ ಜನರು ಅಕಾಲಿಕವಾಗಿ ಸಾವನ್ನಪ್ಪಿದ್ದಾರೆ ಎಂದು ವರದಿ ಹೇಳಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...