ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ನಾಮಪತ್ರ ವಾಪಸ್ ಪಡೆದುಕೊಳ್ಳುವಂತೆ ಬಿಜೆಪಿ ಅಭ್ಯರ್ಥಿಯಾಗಿರುವ ಸಚಿವ ವಿ. ಸೋಮಣ್ಣ ಕರೆ ಮಾಡಿದ್ದಾರೆ ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.
ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಪಕ್ಷ ಅಧಿಕಾರಕ್ಕೆ ಬಂದ ನಂತರ ನಿನಗೆ ಗೂಟದ ಕಾರ್ ಕೊಡುತ್ತೇವೆ. ಮೊದಲು ನಾಮಪತ್ರ ವಾಪಸ್ ತೆಗೆಯಬೇಕು. ತೊಟ್ಟಿ ನನ್ನ ಮಗನ ಮಾತು ಕೇಳಿ ಚುನಾವಣೆಗೆ ನಿಂತಿದ್ದೀಯಾ? ಆಮೇಲೆ ಎಲ್ಲಾ ಮಾತನಾಡೋಣ. ನಿನ್ನ ಬದುಕಿಗೆ ಏನು ಬೇಕೋ ಅದನ್ನು ಮಾಡುತ್ತೇನೆ. ಮೊದಲು ನಾಮಪತ್ರ ವಾಪಸ್ ತೆಗಿ ಎಂದು ಸೋಮಣ್ಣ ಹೇಳಿದ್ದಾರೆ. ಆದರೆ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿ ಇದಕ್ಕೆ ಒಪ್ಪಿಲ್ಲ ಪಕ್ಷದ ನಿರ್ಧಾರದಂತೆ ವಿಧಾನ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಪ್ರಚಾರ ನಡೆಸುವುದಾಗಿ ಹೇಳಿದ್ದಾರೆ.