ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
65 ವರ್ಷದ ಶಾಂತಮ್ಮ ಸಿಡಿಲಿಗೆ ಬಲಿಯಾದವರು ಎಂದು ಹೇಳಲಾಗಿದೆ. ಕೊಪ್ಪಳದ ಶ್ಯಾಡಲಗೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಭಾರಿ ಗಾಳಿ ಮಳೆಯಾಗಿದ್ದು, ಗ್ರಾಮದ ಹೊರವಲಯದಲ್ಲಿ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ಸಿಡಿಲು ಬಡಿದು 5 ಕುರಿ, ಒಂದು ಟಗರು ಮೃತಪಟ್ಟಿವೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


